ಕಾರ್ಕಳ: 15 ದಿನಗಳಲ್ಲಿ ಮೂವರು ಉಪನ್ಯಾಸಕರು ಆತ್ಮಹತ್ಯೆ!

Update: 2021-09-24 11:47 GMT
ಸಾಂದರ್ಭಿಕ ಚಿತ್ರ

ಕಾರ್ಕಳ: ಸೆ.24: ಜಿಲ್ಲೆಯಲ್ಲಿ ದಿನೇ ದಿನೇ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಕಳೆದ 15 ದಿನಗಳಲ್ಲಿ ಕಾರ್ಕಳದ ವಿವಿಧ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಉಪನ್ಯಾಸಕರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವೈಯಕ್ತಿಕ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂಬಿಎ ಪದವೀಧರ ಹಾಗೂ ಕಾರ್ಕಳದ ಖಾಸಗಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದ ರವಳನಾಥ ಶರ್ಮಾ(32) ಎಂಬವರು ಸೆ.12ರಂದು ತನ್ನ ಮನೆಯ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಅದೇ ರೀತಿ ಇನ್ನೊಂದು ಪ್ರಕರಣದಲ್ಲಿ ಕಾರ್ಕಳದ ಎಸ್.ವಿ.ಟಿ. ಪಿಯು ಕಾಲೇಜಿನ ಉಪನ್ಯಾಸಕಿ ಮಮತಾ(41) ಸೆ.20ರಂದು ಪೆರ್ವಾಜೆಯಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರನೇ ಪ್ರಕರಣದಲ್ಲಿ ಮಾನಸಿಕ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದ ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಉಪನ್ಯಾಸಕ ತೆಳ್ಳಾರ್ ನಿವಾಸಿ ಜಯರಂಗ ಟಿ.(75) ಸೆ.23ರಂದು ಮನೆಯ ಕಾಂಪೌಂಡ್ ಆವರಣದ ಶೆಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂರು ಪ್ರಕರಣಗಳು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News