ಮಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾರ್ಯಾಗಾರ
ಮಂಗಳೂರು,ಸೆ.24: ನಗರದ ಕಾರ್‌ಸ್ಟ್ರೀಟ್‌ನ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರು ಮತ್ತು ಸಂಯೋಜಕರಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಯಿತು.
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಡಾ. ಜೆನಿಫರ್ ಲೊಲಿಟಾ ಸಿ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಭಾರತವನ್ನು ವಿಶ್ವಗುರುವನ್ನಾಗಿಸುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜಶೇಖರ್ ಹೆಬ್ಬಾರ್ ಸಿ, ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಬಾಲಕೃಷ್ಣ ಕಲ್ಲೂರಾಯ ಭಾಗವಹಿಸಿದ್ದರು.
ಮಂಗಳೂರು ವಿವಿ ಅಮುಕ್ತ್ ಅಧ್ಯಕ್ಷ ಡಾ. ಎನ್.ಎಂ. ಜೋಸೆಫ್, ಕಾಲೇಜು ಜಂಟಿ ನಿರ್ದೇಶಕರ ಕಚೇರಿಯ ವಿಶೇಷಾಧಿಕಾರಿ ಪ್ರೊ. ಸ್ಟೀವನ್ ಕ್ವಾಡ್ರಸ್ ಮಾತನಾಡಿದರು.
ವೇದಿಕೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ವಿಶೇಷಾಧಿಕಾರಿಗಳಾದ ಪ್ರೊ.ಶ್ರೀಧರ್ ಮಣಿಯಾಣಿ ಮತ್ತು ಡಾ. ಜಯಕರ ಭಂಡಾರಿ ಎಂ.ಉಪಸ್ಥಿತರಿದ್ದರು.
ಕಾರ್ಯಗಾರದ ಮುಖ್ಯ ಸಂಯೋಜಕ ಡಾ. ಪ್ರಕಾಶಚಂದ್ರ ಬಿ. ಸ್ವಾಗತಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ವಿಶೇಷಾಧಿಕಾರಿ ಪ್ರೊ. ದೇವಿ ಪ್ರಸಾದ್ ವಂದಿಸಿದರು.