×
Ad

ಉಡುಪಿ: ​ಮೀನುಗಾರರ ಸಂಘದ ಸದಸ್ಯರ ಹೊಸ ನೊಂದಣಿಗೆ ಸೂಚನೆ

Update: 2021-09-24 18:54 IST

ಉಡುಪಿ, ಸೆ.24: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆ ಯಡಿ ಮೀನುಗಾರರ ಕಲ್ಯಾಣ ಯೋಜನೆಯಾದ ಉಳಿತಾಯ ಮತ್ತು ಪರಿಹಾರ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರಕಾರ ಮಂಜೂರಾತಿ ನೀಡಿದ್ದು, ಮೀನುಗಾರರ ಸಹಕಾರ ಸಂಘಗಳು 2021-22ನೇ ಸಾಲಿಗೆ ಸದಸ್ಯರ ಹೊಸ ನೋಂದಣಿ ಮತ್ತು ನವೀಕರಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶವಿದೆ.

ಈ ಯೋಜನೆಯಲ್ಲಿಭಾಗವಹಿಸಲು ಇಚ್ಛಿಸುವ ಫಲಾನುಭವಿಗಳು ಬಿಪಿಎಲ್ ಕಾರ್ಡ್ ಹೊಂದಿರಬೇಕಾಗಿದ್ದು, 18ರಿಂದ 60 ವರ್ಷ ವಯೋಮಾನದವರಾಗಿರಬೇಕು. ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಬಿಪಿಎಲ್ ಕಾರ್ಡ್‌ನ ಪ್ರತಿ ಹಾಗೂ ಸಂಘದಲ್ಲಿ ಸದಸ್ಯರಾಗಿರುವ ಬಗ್ಗೆ ದೃಢೀಕರಣ ಪತ್ರದೊಂದಿಗೆ ಸದಸ್ಯತನ ಹೊಂದಿದ ಸಹಕಾರ ಸಂಘದ ಮುಖಾಂತರ ತಮ್ಮ ವ್ಯಾಪ್ತಿಯ ತಾಲೂಕು ಮಟ್ಟದ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು (ಉಡುಪಿ/ಕುಂದಾಪುರ) ಇವರ ಕಚೇರಿಗೆ ಸೆ.30ರೊಳಗೆ ಸಲ್ಲಿಸುವಂತೆ ಜಿಲ್ಲಾ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News