ಮೀನುಗಾರರ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡಲು ಸೂಚನೆ
Update: 2021-09-24 18:55 IST
ಉಡುಪಿ, ಸೆ.24: ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಮತ್ತು ಕೋವಿಡ್ ಆರ್ಥಿಕ ಪ್ಯಾಕೇಜ್ ಪರಿಹಾರ ಯೋಜನೆಗಳಿಗೆ ಫಲಾನುಭವಿಗಳು ಡಿಬಿಟಿ ತಂತ್ರಾಂಶದಲ್ಲಿ ನೋಂದಣಿಯಾಗಬೇಕಾಗಿದೆ.
ಡಿಬಿಟಿ ತಂತ್ರಾಂಶವು ಆಧಾರ್ ಅವಲಂಬಿತವಾಗಿರುವುದರಿಂದ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ. ಈತಂತ್ರಾಂಶದಲ್ಲಿ ಈಗಾಗಲೇ ಸಹಾಯಧನ /ಪರಿಹಾರ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗಿದ್ದು, ಅನೇಕ ಫಲಾನುಭವಿಗಳ ಖಾತೆಯ ಬ್ಯಾಂಕ್ ಎಸಿ ನಂ. ಆಧಾರ್ ಲಿಂಕ್ ಆಗದಿರುವುದರಿಂದ ಹಣ ಪಾವತಿಸಲು ಸಾಧ್ಯವಾಗಿರುವುದಿಲ್ಲ. ಹೀಗಾಗಿ ಈ ಫಲಾನುಭವಿಗಳು ತಮ್ಮ ಬ್ಯಾಂಕ್ ಶಾಖೆಗಳಿಗೆ ತೆರಳಿ ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಸೀಡಿಂಗ್ ಮಾಡಿಸಲು ಕ್ರಮ ಜರಗಿಸುವಂತೆ ಉಡುಪಿ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.