ಅಂಗನವಾಡಿ ಸಹಾಯಕಿಯರ ಗೌರವ ಧನ ಹೆಚ್ಚಳ ಪ್ರಸ್ತಾವ ಸರಕಾರದ ಮುಂದಿಲ್ಲ: ಸಚಿವ ಆಚಾರ್ ಹಾಲಪ್ಪ

Update: 2021-09-24 13:38 GMT

ಬೆಂಗಳೂರು, ಸೆ. 24: `ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಸಹಾಯಕಿಯರಿಗೆ ಮಾಸಿಕ 5,250 ರೂ.ಗೌರವಧನವನ್ನು ನೀಡುತ್ತಿದ್ದು, ಅದನ್ನು ಹೆಚ್ಚಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಆಚಾರ್ ಹಾಲಪ್ಪ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, `ಕೇಂದ್ರ ಮತ್ತು ರಾಜ್ಯ ಸರಕಾರ ಸೇರಿ ಅಂಗನವಾಡಿ ಸಹಾಯಕಿಯರಿಗೆ ಗೌರವ ಧನವನ್ನು ನೀಡುತ್ತಿದ್ದು, ಸದಕ್ಕೆ ಅದನ್ನು ಹೆಚ್ಚಳ ಮಾಡುವ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದರು.

ಹಾಲಿ ನೀಡುತ್ತಿರುವ ಗೌರವಧನ ಮೊತ್ತವು ಜೀವನೋಪಾಯಕ್ಕೆ ಸಾಕಾಗುವುದಿಲ್ಲ ಎಂಬ ಬೇಡಿಕೆಯೂ ಸರಕಾರದ ಗಮನಕ್ಕೆ ಬಂದಿದೆ. 2019ರ ನವೆಂಬರ್ 1ರಿಂದ ಅನ್ವಯ ಆಗುವಂತೆ ಗೌರವ ಧನವನ್ನು 250 ರೂ.ಗಳನ್ನು ಹೆಚ್ಚಸಲಾಗಿದೆ ಎಂದು ಅವರು ವಿವರಣೆ ನೀಡಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಯತೀಂದ್ರ, `ಅಂಗನವಾಡಿ ಸಹಾಯಕಿಯರು ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಇದೀಗ ಕೋವಿಡ್ ಲಸಿಕೆ ಕೊಡಿಸಲು ವಿಶೇಷವಾಗಿ ಶ್ರಮಿಸಿದ್ದಾರೆ. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇವಲ 5,250 ರೂ. ಮೊತ್ತದಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದೆ. ಆದುದರಿಂದ ಆ ಮೊತ್ತವನ್ನು ಹೆಚ್ಚಳ ಮಾಡಬೇಕು' ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News