ಉಪ್ಪೂರು: ಸೆ.25ರಂದು ಜಿಟಿಟಿಸಿ ತರಬೇತಿ ಸಂಕೀರ್ಣ ಉದ್ಘಾಟನೆ
ಉಡುಪಿ, ಸೆ.24:ಜಿಲ್ಲೆಯ ಉಪ್ಪೂರಿನಲ್ಲಿ ನಿರ್ಮಾಣಗೊಂಡಿರುವ ಸರಕಾರಿ ಉಪಕರಣಾಗಾರ ಮತ್ತು ನೂತನ ತರಬೇತಿ ಕೇಂದ್ರವನ್ನು ಸೆ.25ರ ಅಪರಾಹ್ನ 1:00 ಗಂಟೆಗೆ ರಾಜ್ಯ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್‌ನಾರಾಯಣ ಸಿ.ಎನ್ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಮತ್ತು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಲಿದ್ದಾರೆ
ಜಿಲ್ಲಾಧಿಕಾರಿ ಕೂರ್ಮಾರಾವ್ ಎಮ್, ಜಿಪಂ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಡಾ. ನವೀನ್ ಭಟ್ ವೈ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಉಪ್ಪೂರು ಗ್ರಾಪಂ ಅಧ್ಯಕ್ಷ ಕೃಷ್ಣರಾಜ ಕೋಟ್ಯಾನ್ ಅವರೂ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.