ಸೆ.25: ಉಡುಪಿಗೆ ಕೇಂದ್ರ ಆಯುಷ್ ಸಚಿವರು
ಉಡುಪಿ, ಸೆ.24: ಕೇಂದ್ರದ ಬಂದರು, ಶಿಪ್ಪಿಂಗ್ ಮತ್ತು ಜಲಸಾರಿಗೆ ಹಾಗೂ ಆಯುಷ್ ಇಲಾಖೆ ಸಚಿವ ಸರ್ಬಾನಂದ ಸೋನೊವಾಲ್ ಅವರು ಶನಿವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನಾಳೆ ಬೆಳಗ್ಗೆ 10:00 ಗಂಟೆಗೆ ಕುತ್ಪಾಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ರತ್ನಶ್ರೀ ಆರೋಗ್ಯಧಾಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಅವರು ಅಪರಾಹ್ನ 12:40ಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಬಳಕ ಮಂಗಳೂರಿಗೆ ತೆರಳುವರು.
ಶೋಭಾ ಕರಂದ್ಲಾಜೆ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೆ.25ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗ್ಗೆ 8:30ಕ್ಕೆ ಎಂಜಿಎಂ ಕಾಲೇಜು ಹಾಗೂ ಪಿಪಿಸಿ ಕಾಲೇಜಿನಲ್ಲಿ ನಡೆಯುವ ಪ್ರೀಡಂ ರನ್ ಕಾರ್ಯಕ್ರಮ ಉದ್ಘಾಟಿಸಿ, 9:00ಕ್ಕೆ ಬಿಜೆಪಿ ಕಚೇರಿಯಲ್ಲಿ ನಡೆಯುವ ರಕ್ತದಾನ ಶಿಬಿರಕ್ಕೆ ಚಾಲನೆ ನೀಡುವರು. 9:30ಕ್ಕೆ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ರತ್ನಶ್ರೀ ಆರೋಗ್ಯಧಾಮ ಉದ್ಘಾಟನೆ, 11:45ಕ್ಕೆ ಬೆಳಪುನಲ್ಲಿ ಸರಕಾರಿ ಪಾಲಿಟೆಕ್ನಿಕ್ ಉದ್ಘಾಟನೆ, ಅಪರಾಹ್ನ 1:00ಕ್ಕೆ ಉಪ್ಪೂರಿನಲ್ಲಿ ಜಿಟಿಟಿಸಿ ಕಾಲೇಜು ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ತರೀಕೆರೆಗೆ ತೆರಳುವರು.