ಬಿಬಿಎಂಪಿಗೆ 847 ಕೋಟಿ ರೂ.ಗಳ ತೆರಿಗೆ ಹಣ ನಷ್ಟ

Update: 2021-09-24 17:13 GMT

ಬೆಂಗಳೂರು ಸೆ.24: ಬೀದಿ ದೀಪಗಳಿಗೆ ಎಲ್‍ಇಡಿ ಬಲ್ಬ್ ಅಳವಡಿಕೆ ಕಾರ್ಯಕ್ಕೆ ಜನಪ್ರತಿನಿಧಿಗಳು ಅಡ್ಡಗಾಲು ಹಾಕುತ್ತಿದ್ದಾರೆ. ಇದರಿಂದ ಮೂರು ವರ್ಷಗಳಲ್ಲಿ ಸುಮಾರು 847 ಕೋಟಿ ರೂಪಾಯಿಗಳ ನಷ್ಟವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಅವರು ಆರೋಪಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬಲ್ಬ್‍ಗಳ ಅಳವಡಿಕೆಗೆ ಷಹಾಪೋರ್ಜಿ ಪಲ್ಲೊಂಜಿ, ಎಸ್‍ಎಮ್‍ಎಸ್ ಇನ್ಪ್ರಾಸ್ಟ್ರಕ್ಚರ್ ಮತ್ತು ಸಮುದ್ರ ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಎಂಬ ಮೂರು ಕಂಪನಿಗಳ ಕನ್ಸಾರ್ಷಿಯಮ್‍ಗೆ 2018ರಲ್ಲಿ ಟೆಂಡರ್ ನೀಡಲಾಗಿತ್ತು. ಆದರೆ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ತಿಳಿಸಿದರು.

ಅಲ್ಲದೇ, ಪಿಡಬ್ಲೂಸಿ ಸಂಸ್ಥೆಯು ನಗರದಲ್ಲಿ ಬೀದಿ ದೀಪಗಳ ವಿದ್ಯುತ್ ಬಳಕೆಯ ಬಗ್ಗೆ ನಡೆಸಲಾದ ಅಧ್ಯಯನದಲ್ಲಿ ಬಿಬಿಎಂಪಿ ಪ್ರತಿವರ್ಷ ತನ್ನ 4.85 ಲಕ್ಷ ಬೀದಿದೀಪಗಳ ನಿರ್ವಹಣೆಗೆ 240 ಕೋಟಿ ರೂಪಾಯಿಗಳನ್ನು ಖರ್ಚುಮಾಡುತ್ತಿದೆ ಎಂದು ಮಾಹಿತಿ ನೀಡಿದರು. 

5 ಲಕ್ಷ ಎಲ್‍ಇಡಿ ವಿದ್ಯುತ್ ದೀಪಗಳನ್ನು ಅಳವಡಿಸಿ ಅವುಗಳ ಸಮರ್ಪಕ ನಿರ್ವಹಣೆ ಮಾಡಿದರೆ, ಶೇ.85.50%ರಷ್ಟು ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಬಹುದು. ಆದರೆ, ಇಂತಹ ಉತ್ತಮ ಯೋಜನೆ ಕಾರ್ಯಗತಗೊಳಿಸುವಲ್ಲಿ ಜನಪ್ರತಿನಿಧಿಗಳು ತೊಂದರೆ ನೀಡುತ್ತಿದ್ದಾರೆ. ಈಗ ಆಗಿರುವ ನಷ್ಟವನ್ನು ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಆಡಳಿತ ನಡೆಸಿದ ಪಕ್ಷಗಳಿಂದಲೇ ವಸೂಲು ಮಾಡಿಕೊಳ್ಳಬೇಕು. ಅಲ್ಲದೇ ಈ ಕೂಡಲೇ ಮುಖ್ಯಮಂತ್ರಿಗಳು ಮಧ್ಯೆ ಪ್ರವೇಶಿಸಿ, ಬೀದಿ ದೀಪಗಳ ಎಲ್‍ಇಡಿ ಅಳವಡಿಕೆಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದು ಮೋಹನ್ ದಾಸರಿ ಅವರು ಆಗ್ರಹಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News