ತುಮಕೂರು: ತಾಯಿ ಮಕ್ಕಳ ಅಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆಗೆ ಸಿಎಂ ಶಂಕುಸ್ಥಾಪನೆ

Update: 2021-09-25 09:06 GMT

ತುಮಕೂರು, ಸೆ.25: ತುಮಕೂರು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತುಮಕೂರಿನಲ್ಲಿ ಶನಿವಾರ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರ ನಿರ್ಮಾಣಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದರು.  ಶಾಸಕ ಜ್ಯೋತಿಗಣೇಶ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಣ್ಣ ನೀರಾವರಿ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಶಿಕ್ಷಣ ಸಚಿವ ಡಿ.ಸಿ.ನಾಗೇಶ್, ಸಂಸದರಾದ ಜಿ.ಎಸ್ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News