ಹೂಡೆ ಸಾಲಿಹಾತ್‌ನಲ್ಲಿ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ

Update: 2021-09-25 07:57 GMT

ಉಡುಪಿ, ಸೆ.25: ತೋನ್ಸೆ- ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯ ವತಿಯಿಂದ 2020-21ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸಾಧಕ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಇದೇವೇಳೆ ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸುರೇಶ ಮರಕಲ ಹಾಗೂ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಬಡ ನಿಡಿಯೂರು ಶಾಲೆಯ ಮುಖ್ಯಶಿಕ್ಷಕ ದಿನಕರ ಶೆಟ್ಟಿ, ಸ್ಥಳೀಯ ಹಿಂದು ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಭವಾನಿಯವರನ್ನು ಸನ್ಮಾನಿಸಲಾಯಿತು.

ಗ್ಯಾಸ್ ಸೇವಿಂಗ್ ಕಿಟ್ ನೂತನ ಅವಿಷ್ಕಾರದ ಸಾಧನ ನಿರ್ಮಿಸಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದ ಅಲ್ಬಾಡಿಯ ಆರ್ಡಿ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ರಕ್ಷಿತಾ ನಾಯ್ಕ್ ಹಾಗೂ ಅನುಷಾರನ್ನು ಗೌರವಿಸಲಾಯಿತು.

ಸಾಲಿಹಾತ್ ಶಿಕ್ಷಣ ಸಂಸ್ಥೆಯ ಸಲಹಾ ಮಂಡಳಿ ಉಪಾಧ್ಯಕ್ಷ ಬೆಳ್ವೆ ಮುಶ್ತಾಕ್ ಅಹ್ಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಆರ್ಡಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶೇಕರ ಶೆಟ್ಟಿಗಾರ್, ಶಿಕ್ಷಣ ಸಂಸ್ಥೆಯ ಹಿತೈಷಿ ಅನ್ಸಾರ್ ಟಿ.ಎಸ್., ಟ್ರಸ್ಟಿನ ಖಜಾಂಚಿ ಅಬ್ದುಲ್ ಖಾದರ್, ಸಲಹಾ ಮಂಡಳಿಯ ಅಧ್ಯಕ್ಷ ಡಾ.ಶಹನಾಝ್, ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಮೊದಲಾದವರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ರಿಝಾ ಹಾಗೂ ಸುಹಾ ಪಾರ್ಥಿಸಿದರು. ಹಿಬಾ ಸ್ವಾಗತಿಸಿ, ರೇಷ್ಮ ವಂದಿಸಿದರು. ನಿದಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News