ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳು

Update: 2021-09-25 12:14 GMT

ಉಡುಪಿ, ಸೆ.25: ಪ್ರಸಕ್ತ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆ.29ರಂದು ಬೆಳಗ್ಗೆ 9:30ರಿಂದ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

60 ವರ್ಷ ಮೇಲ್ಪಟ್ಟ ಕೋವಿಡ್ ಎರಡೂ ಡೋಸ್ ಲಸಿಕೆಗಳನ್ನು ಪಡೆದಿರುವ ಹಿರಿಯ ನಾಗರಿಕರು ಹಿರಿಯ ನಾಗರಿಕರ ಗುರುತು ಚೀಟಿ ಅಥವಾ ವಯಸ್ಸಿನ ಅಧಿಕೃತ ದಾಖಲೆಗಳೊಂದಿಗೆ ಈ ಕೆಳಕಂಡ ಸ್ಪರ್ಧೆಗಳಲ್ಲಿ ಭಾಗವಹಿಸ ಬಹುದಾಗಿದೆ.

ಕ್ರೀಡಾ ಸ್ಪರ್ಧೆಗಳು:   60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರ ಪ್ರತ್ಯೇಕ ವಿಭಾಗದಲ್ಲಿ ನಡಿಗೆ, ರಿಂಗನ್ನು ಬಕೆಟ್‌ನಲ್ಲಿ ಎಸೆಯುವುದು ಮತ್ತು ಕೇರಂ ಸ್ಪರ್ಧೆಗಳು.

ಸಾಂಸ್ಕೃತಿಕ ಸ್ಪರ್ಧೆಗಳು: 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರ ಪ್ರತ್ಯೇಕ ವಿಭಾಗದಲ್ಲಿ ಏಕಪಾತ್ರ ಅಭಿನಯ, ಗಾಯನ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆ.

ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ‘ಸಿ’ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ-576104, ದೂರವಾಣಿ ಸಂಖ್ಯೆ: 0820-2574810/811ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News