ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ 1 ಲಕ್ಷ ರೂ. ಪರಿಹಾರ ಬಿಡುಗಡೆ

Update: 2021-09-25 12:51 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.25: ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ವಾರಸುದಾರರಿಗೆ ಘೋಷಿಸಿರುವ 1 ಲಕ್ಷ ಪರಿಹಾರ ಮೊತ್ತವನ್ನು ಪಿಡಿ ಖಾತೆಯಿಂದ ಭರಿಸಲು ಜಿಲ್ಲಾಧಿಕಾರಿಗಳಿಗೆ ಅನುಮತಿಸಿ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬದ ಅರ್ಹ ಕಾನೂನುಬದ್ಧ ವಾರಸುದಾರರಿಗೆ 1 ಲಕ್ಷ ಪರಿಹಾರ ಧನವನ್ನು ಸರಕಾರ ಘೋಷಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಜಿಲ್ಲಾ ವಿಪತ್ತು ಪರಿಹಾರ ನಿಧಿ (ಡಿಡಿಆರ್‍ಫ್) ಪಿಡಿ ಖಾತೆಯಲ್ಲಿ ಪ್ರಸ್ತುತ ಲಭ್ಯವಿರುವ ಅನುದಾನದಿಂದ ಈ ಹಣವನ್ನು ಭರಿಸಲು ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿ ಆದೇಶಿಸಲಾಗಿದೆ.

ಕೊರೋನದಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ಪರಿಹಾರ ಪಾವತಿಸುವ ವಿಧಾನದ ಕುರಿತು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಿ ಮುಂದಿನ ನಿರ್ದೇಶನ ನೀಡುವವರೆಗೆ ಮಾತ್ರ ಬಿಪಿಎಲ್ ಕುಟುಂಬದ ವ್ಯಕ್ತಿಗಳ ಅರ್ಹ ಕಾನೂನುಬದ್ಧ ವಾರಸುದಾರರಿಗೆ ತಲಾ 1 ಲಕ್ಷ ಚೆಕ್ ಮೂಲಕ ವಿತರಿಸಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News