ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Update: 2021-09-25 12:30 GMT

ಉಡುಪಿ, ಸೆ.25: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2019-20 ಹಾಗೂ 2020-21ನೆ ಸಾಲಿನಲ್ಲಿ ನಡೆದ ಸಿಬಿಎಸ್‌ಸಿ, ಐಸಿಎಸ್‌ಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳಲ್ಲಿ ಪ್ರಥಮ ಸ್ಥಾನದಲ್ಲಿ ಉರ್ತ್ತೀಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಇಲಾಖಾ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ ಅಪ್‌ಡೇಟ್ ಮಾಡಿಸಲು ತಮ್ಮ ತಾಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದ್ದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2574892 ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News