ಎಸೆಸೆಲ್ಸಿ ಪೂರಕ ಪರೀಕ್ಷಾ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣ

Update: 2021-09-25 13:00 GMT

ಬೆಂಗಳೂರು, ಸೆ.25: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸೆ. 27 ಮತ್ತು 29ರಂದು ನಡೆಯಲಿರುವ 2020-21 ನೇ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅನುಮತಿ ಕಲ್ಪಿಸಿದೆ. 

ವಿದ್ಯಾರ್ಥಿಗಳು ಬಸ್ ಪಾಸ್ ಅಥವಾ ಪ್ರವೇಶ ಪತ್ರವನ್ನು(ಅಡ್ಮಿಷನ್ ಟಿಕೇಟ್) ತೋರಿಸಿದರೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಹಾಗೂ ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಬೆಂ.ಮ.ಸಾ.ಸಂಸ್ಥೆಯು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ರಿಯಾಯಿತಿ ಪಾಸುಗಳನ್ನು ವಿತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News