ರಾಜ್ಯದಲ್ಲಿಂದು 787 ಮಂದಿಗೆ ಕೊರೋನ ದೃಢ, 11 ಮಂದಿ ಸಾವು

Update: 2021-09-25 15:56 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.25: ರಾಜ್ಯದಲ್ಲಿ ಶನಿವಾರ 787 ಹೊಸ ಕೊರೋನ ಪ್ರಕರಣಗಳು ದೃಢಪಟ್ಟಿವೆ. 11 ಜನರು ಸೋಂಕಿಗೆ ಬಲಿಯಾಗಿದ್ದು, 775 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,72,620ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,717ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 13,307ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

11 ಸೋಂಕಿತರು ಬಲಿ: ಬೆಳಗಾವಿ 2, ಬೆಂಗಳೂರು ನಗರ 4, ಚಿಕ್ಕಮಗಳೂರು 2, ದಕ್ಷಿಣ ಕನ್ನಡ 1, ಶಿವಮೊಗ್ಗ 1, ಉಡುಪಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 787 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 1, ಬೆಳಗಾವಿ 22, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 276, ಚಾಮರಾಜನಗರ 6, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 27, ಚಿತ್ರದುರ್ಗ 7, ದಕ್ಷಿಣ ಕನ್ನಡ 127, ದಾವಣಗೆರೆ 1, ಧಾರವಾಡ 6, ಹಾಸನ 19, ಹಾವೇರಿ 1, ಕಲಬುರಗಿ 1, ಕೊಡಗು 25, ಕೋಲಾರ 22, ಮಂಡ್ಯ 9, ಮೈಸೂರು 65, ರಾಯಚೂರು 1, ರಾಮನಗರ 2, ಶಿವಮೊಗ್ಗ 21, ತುಮಕೂರು 29, ಉಡುಪಿ 68, ಉತ್ತರ ಕನ್ನಡ 27, ಯಾದಗಿರಿ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 276 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಶುಕ್ರವಾರದಂದು 276 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 4 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,45,235 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,129 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,21,669 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News