ಬೆಳ್ತಂಗಡಿ : ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

Update: 2021-09-25 17:37 GMT

ಬೆಳ್ತಂಗಡಿ : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಭವಿಷ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕತ್ತರಿ ಹಾಕುವ ನೀತಿಯಾಗಿದ್ದು  ಇದನ್ನು ತಕ್ಷಣ ಹಿಂಪಡೆಯ ಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿಗೆ ಮಾರ್ಚ್ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ ಜಿಲ್ಲಾ ನಾಯಕಿ ಗೌಸಿಯಾ ಮಂಗಳೂರು ಮಾತನಾಡಿ ಹೊಸ ಶಿಕ್ಷಣ ನೀತಿಯನ್ನು ಲೋಕಸಭೆ ಮತ್ತು ವಿಧಾನ‌ಸಭೆಯಲ್ಲಿ ಚರ್ಚೆ ನಡೆಸದೆ, ತರಾತುರಿಯಲ್ಲಿ ಹಿಂಬಾಗಿಲಿನ ಮೂಲಕ ಜಾರಿಗೊಳಿಸಲು ಸರಕಾರವು ಹೊರಟಿದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇದು ಸಂಪೂರ್ಣವಾಗಿ ಕೇಸರೀಕರಣಗೊಳಿಸುವ ಮತ್ತು ಖಾಸಗೀಕರಣಗೊಳಿಸುವ ಹುನ್ನಾರವಾಗಿದೆ, ಹಾಗೂ ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ 3 ವರ್ಷ ಇರುವ ಪದವಿಯನ್ನು 4 ವರ್ಷಕ್ಕೆ ಏರಿಸಿದ್ದು, ಒಂದು ವರ್ಷ ಪದವಿ ಕಲಿತರೂ ಪ್ರಮಾಣ ಪತ್ರ ನೀಡುವಂತಹ ಈ ನೀತಿಯಿಂದ ಮೌಲ್ಯಯುತ ಶಿಕ್ಷಣಕ್ಕೆ ತೊಂದರೆಯಾಗಲಿದೆ, ಮತ್ತು ನಿರುದ್ಯೋಗ ಸಮಸ್ಯೆ ಇನ್ನೂ ಹೆಚ್ಚಾಗಲಿದೆ. ಆದ್ದರಿಂದ ರಾಜ್ಯದಲ್ಲಿ  ಜಾರಿ ಮಾಡುತ್ತಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಮುಖಂಡ "ರಿಯಾಝ್ ಅಂಕತಡ್ಕ, ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷ ಯಾಸೀನ್ ಬಂಗೇರಕಟ್ಟೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಶಹೀರ್ ಪಾಂಡವರಕಲ್ಲು, ಜಿಲ್ಲಾ ಕೋಶಾಧಿಕಾರಿ ಝಾಹೀದ್ ಸುನ್ನತ್ಕೆರೆ, ಜಿಲ್ಲಾ ನಾಯಕರಾದ ಸಹಝಾದ್, ಫೈಝಲ್ ಬಂಗೇರಕಟ್ಟೆ  ಹಾಗು ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News