ಕೇಂದ್ರದಿಂದ 82.57 ಕೋಟಿಗೂ ಅಧಿಕ ಕೋವಿಡ್ ಲಸಿಕೆ ಡೋಸ್ ಪೂರೈಕೆ

Update: 2021-09-25 17:59 GMT

ಫಿರೋಝಾಬಾದ್, ಸೆ. 25: ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 82.57 ಕೋಟಿಗೂ ಅಧಿಕ ಕೋವಿಡ್ ಲಸಿಕೆಯ ಡೋಸ್‌ಗಳನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದಲ್ಲದೆ, 94 ಲಕ್ಷಕ್ಕೂ ಅಧಿಕ ಡೋಸ್‌ಗಳನ್ನು ಪೂರೈಸಲು ಸಿದ್ಧತೆ ನಡೆಸಲಾಗಿದೆ ಎಂದು ಅದು ತಿಳಿಸಿದೆ. 4.15 ಕೋಟಿಗೂ ಅಧಿಕ ಬಾಕಿಯಾದ ಹಾಗೂ ಬಳಕೆಯಾಗದ ಲಸಿಕೆಗಳು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿವೆ ಎಂದು ಅದು ಹೇಳಿದೆ. ರಾಷ್ಟ್ರವ್ಯಾಪಿ ಕೋವಿಡ್ ಲಸಿಕಾ ಅಭಿಯಾನದ ಭಾಗವಾಗಿ ಕೇಂದ್ರ ಸರಕಾರ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಸುವ ಮೂಲಕ ಸಹಕರಿಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News