ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Update: 2021-09-26 11:44 GMT

ಮಂಗಳೂರು, ಸೆ.26 : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಗರದ ಬಂಟ್ಸ್ ಹಾಸ್ಟೆಲ್‌ನ ಅಮೃತೋತ್ಸವ ಕಟ್ಟಡದಲ್ಲಿ ಇತ್ತೀಚೆಗೆ ನಡೆದ ಸಮಾಜ ಕಲ್ಯಾಣ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ರಾಷ್ಟ್ರೀಯ ಕಣ್ಮಣಿ ರಾಷ್ಟ್ರ ಪ್ರಶಸ್ತಿ ಪಡೆದ ಮಾಲತಿ ಶೆಟ್ಟಿ ಮಾಣೂರು ಹಾಗೂ ಪತ್ರಕರ್ತ ನಿಶಾಂತ್ ಶೆಟ್ಟಿ ಕಿಲೆಂಜೂರು ಸನ್ಮಾನಿಸಲಾಯಿತು.

ಚಿತ್ರ ನಿರ್ದೇಶಕರಾದ ಎಸ್.ವಿ. ರಾಜೇಂದ್ರ ಸಿಂಗ್ ಬಾಬು, ವಿಜಯ ಕುಮಾರ್ ಕೊಡಿಯಾಲ್‌ಬೈಲ್, ಒಕ್ಕೂಟದ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ಲಯನ್ಸ್ ಗವರ್ನರ್ ವಸಂತ ಶೆಟ್ಟಿ ಅವರನ್ನು ಗೌರವಿಸ ಲಾಯಿತು.

ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಇತರ ಪದಾಧಿಕಾರಿಗಳಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಉಳ್ತೂರು ಮೋಹನದಾಸ್ ಶೆಟ್ಟಿ, ಸತೀಶ ಅಡಪ ಸಂಕಬೈಲ್‌ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News