ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಿಂದ 'ಸ್ವಚ್ಛ ಕಡಲತೀರ, ಹಸಿರು ಕೋಡಿ' ಅಭಿಯಾನಕ್ಕೆ ಚಾಲನೆ

Update: 2021-09-26 12:34 GMT

ಕುಂದಾಪುರ, ಸೆ.26: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ವಿಶ್ವ ಹಸಿರು ಕಟ್ಟಡ ಸಪ್ತಾಹದ ಅಂಗವಾಗಿ ಕೋಡಿ ಕಡಲ ತೀರದ ಸ್ವಚ್ಛತಾ ಕಾರ್ಯಕ್ರಮವನ್ನು ರವಿವಾರ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಮಾತನಾಡಿ, ಇಂದಿನ ಈ ಕಾರ್ಯಕ್ರಮದ ಪ್ರಮುಖ ರೂವಾರಿಗಳು ಮಕ್ಕಳು. ಅವರು ಕೈಗೊಂಡ ಈ ಕೆಲಸ ದೇವರ ಕೆಲಸ. ಯಾವುದು ಪರಿಸರದ ಹೊರಗಡೆ ಇದೆಯೋ ಅವೆಲ್ಲವೂ ನಮ್ಮ ದೇಹದ ಒಳಗಡೆ ಸೇರುತ್ತವೆ. ಪರಿಸರ ಕಲುಷಿತಗೊಂಡರೆ ಗಾಳಿ, ನೀರು, ಆಹಾರ ಸೇವನೆಯಿಂದ ನಮ್ಮ ದೇಹದ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಪ್ಲಾಸ್ಟಿಕ್‌ ನಂತಹ ವಸ್ತುಗಳ ಬಳಕೆಯನ್ನು ತಡೆಯುವುದು, ಪರಿಸರ ಸ್ನೇಹಿ ವಸ್ತುಗಳನ್ನು ಮರು ಬಳಕೆಗೆ ಒಳಪಡಿಸುವುದರಿಂದ ಪರಿಸರ ಸಂರಕ್ಷಣೆ ಮಾಡಬಹುದು ಎಂದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಕಾರ್ಯಕ್ರಮದ ರುವಾರಿ ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸೈಯ್ಯದ್ ಮೊಹಮ್ಮದ್ ಬ್ಯಾರಿ, ಕೋಡಿ ಕಡಲತೀರ ಸ್ವಚ್ಛತೆ, ಹಸಿರು ಕೋಡಿ ಯೋಜನೆಯಿಂದ ವಿಶ್ವದಲ್ಲಿ ಕೋಡಿ ಪರಿಸರವು ವಿಶೇಷವಾಗಿ ಗುರುತಿಸಲ್ಪಡುವಂತಾಗಬೇಕೆಂಬ ಆಕಾಂಕ್ಷೆಯನ್ನು ಹೊಂದಲಾಗಿದೆ ಎಂದು ತಿಳಿಸಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರಹ್ಮಾನ್, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಪುರಸಭಾ ಸದಸ್ಯರುಗಳಾದ ಕಮಲಾ, ಲಕ್ಷ್ಮೀ, ಪುರಸಭೆ ನಾಮ ನಿರ್ದೇಶಿತ ಸದಸ್ಯ ನಾಗರಾಜ್ ಕಾಂಚನ್, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರುಗಳಾದ ಸಿದ್ದಪ್ಪ ಕೆ.ಎಸ್., ಡಾ.ಶಮೀರ್, ಡಾ. ಫಿರ್ದೋಸ್, ಅಶ್ವಿನಿ ಶೆಟ್ಟಿ, ಜಯಂತಿ, ದುರ್ಗಿ ಪಟೆಗಾರ್, ಸುಮಿತ್ರಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಭಾಕರ್ ಕೆ., ಕೋಶಾಧಿಕಾರಿ ಅಬ್ದುಲ್ ಕೆ., ಸದಸ್ಯರಾದ ಶಂಕರ್ ಪೂಜಾರಿ, ಸಂಜೀವ ಪೂಜಾರಿ, ಭಾಸ್ಕರ್ ಪುತ್ರನ್, ರಫೀಕ್, ತಿಮ್ಮಪ್ಪ ಖಾರ್ವಿ, ರಾಮಕೃಷ್ಣ ಪೂಜಾರಿ, ಗೋಪಾಲ ಪೂಜಾರಿ, ಶಿಕ್ಷಕ ರಕ್ಷಕ ಸಂಘದ ಮುಖ್ಯ ಸಲಹೆಗಾರ ಅಬುಶೇಕ್, ಉಪಾಧ್ಯಕ್ಷರಾದ ಮುಸ್ತರಿನ್, ಪ್ರಕಾಶ್, ಖಜಾಂಚಿ ರಫೀಕ್ ಮೊದಲಾದವರು ಉಪಸ್ಥಿತರಿದ್ದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ದೋಮ ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯಶೀಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಬಳಿಕ ಹಳೆ ಅಳಿವೆಯಿಂದ ಡೆಲ್ಟಾ ಪಾಯಿಂಟ್ ವರೆಗಿನ ಕಡಲ ತೀರವನ್ನು ಸ್ವಚ್ಛಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News