ಬೆಂಗಳೂರು; ವಾಹನ ನಿಲುಗಡೆ ಎಚ್ಚರವಿರಲಿ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

Update: 2021-09-26 13:00 GMT

ಬೆಂಗಳೂರು, ಸೆ. 26: ನಿರ್ಲಕ್ಷತೆಯಿಂದ ವಾಹನಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡ್ಡಿ ಉಂಟುಮಾಡುವ ವಾಹನಗಳನ್ನು ಟೋಯಿಂಗ್ ಮಾಡಿ ದಂಡ ವಿಧಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದರು. 

ನಗರದ ಕೋರಮಂಗಲ ಠಾಣೆ ಆವರಣದಲ್ಲಿ ಆಯೋಜಿಸಿದ್ದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಗರದ ರಸ್ತೆಗಳ ಇಕ್ಕೆಲಗಳಲ್ಲಿ, ಕೆಲವು ರಸ್ತೆಗಳ ಪಾದಚಾರಿ ಮಾರ್ಗದಲ್ಲೂ ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳನ್ನು ಟೋಯಿಂಗ್ ಮಾಡದೇ ಬೇರೆ ಮಾರ್ಗವಿಲ್ಲ ಎಂದರು. 

ಇನ್ನೂ, ಯಾವ ಪ್ರದೇಶದಲ್ಲಿ ಯುವಕರು ಆ ರೀತಿ ಬೈಕ್ ರೈಡಿಂಗ್ ಮಾಡುತ್ತಿದ್ದಾರೆ ಎಂಬ ಬಗ್ಗೆ ಪೆÇಲೀಸರಿಗೆ ಮಾಹಿತಿ ನೀಡಿದರೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಬಗ್ಗೆ ಸಮೀಪದ ಸಂಚಾರ ಠಾಣೆ ಅಥವಾ ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡಿದರೆ ಟೋಯಿಂಗ್ ಮೂಲಕ ವಾಹನ ಟೋಯಿಂಗ್ ಮಾಡಿ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಆಗ್ನೇಯ ವಿಭಾಗ ಡಿಸಿಪಿ ಶ್ರೀನಾಥ್ ಮಹದೇವ್ ಜೋಶಿ, ಮಡಿವಾಳ ಉಪವಿಭಾಗ ಎಸಿಪಿ ಶ್ರೀಧರ್ ಎಂ. ಹೆಗಡೆ ಸೇರಿದಂತೆ ಪ್ರಮುಖರಿದ್ದರು.    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News