ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ: ಡಿ.ಕೆ.ಶಿವಕುಮಾರ್

Update: 2021-09-26 13:22 GMT

ಬೆಂಗಳೂರು, ಸೆ. 26: ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಕನ್ನಡ ನುಡಿ ಚನ್ನಾ ಸುಲಿತ ಭಾಷೆ ಎಂದೇ ಹೆಸರು ಗಳಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ರವಿವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಸ್ನೇಹಜೀವಿ ಗೆಳೆಯರ ಬಳಗ ಆಯೋಜಿಸಿದ್ದ ಕನ್ನಡ ಭಾಷೆ ವಿಶ್ವಕ್ಕೆ ಅಮೃತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆಯ ಚಲನಚಿತ್ರ ಗೀತೆಗಳಿಗೆ ಪಿ.ಬಿ.ಶ್ರೀನಿವಾಸ್ ಮತ್ತು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ತಮ್ಮ ಗಾನ ಸಿರಿಯಿಂದ ನಾಡಿನ ಜನರ ಹೃದಯದಲ್ಲಿ ನೆಲಸಿದ್ದಾರೆ. ಕೆಪಿಸಿಸಿ ವತಿಯಿಂದ ಸಾಹಿತಿ, ರಂಗಭೂಮಿ ಕಲಾವಿದರು ಹಾಗೂ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರ ಸಂಘಟನೆ ಹಾಗೂ ಸಹಕಾರ ನೀಡಲೆಂದೇ ಕಾಂಗ್ರೆಸ್ ಸಾಂಸ್ಕøತಿಕ ಘಟಕ ಆರಂಭಿಸಲಾಗಿದೆ ಎಂದು ಹೇಳಿದರು. 

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಮ್ ಅಹಮ್ಮದ್, ಮಾಜಿ ಶಾಸಕ ನಂಜಯ್ಯ ಮಠ ಮತ್ತು ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷ ಪುಷ್ಪ ಅಮರ್‍ನಾಥ್ ಮತ್ತಿತರರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಜನಾರ್ಧನ್, ಆನಂದ್, ಜಯಸಿಂಹ ಮತ್ತು ಕೆಪಿಸಿಸಿ ವಕ್ತಾರ ಸಲೀಮ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News