ನಾಳೆ ಭಾರತ್ ಬಂದ್‍: ಬೆಂಗಳೂರು ಸಂಚಾರ ಮಾರ್ಗ ಬದಲು

Update: 2021-09-26 13:27 GMT

ಬೆಂಗಳೂರು, ಸೆ. 26: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ(ಸೆ.27) ಭಾರತ್ ಬಂದ್‍ಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ರೈತರು ಜಾಥಾ ಹಮ್ಮಿಕೊಂಡಿರುವುದರಿಂದ ಬೆಂಗಳೂರು ಸಂಚಾರ ಪೊಲೀಸರು ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ. 

ನಗರದ ಕೆ.ಜಿ.ರಸ್ತೆಯಲ್ಲಿ ಹಲಸೂರು ಪೊಲೀಸ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಂಡು ಕೆ.ಜಿ.ರಸ್ತೆ ಕಡೆಗೆ ಸಾಗುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹಾಗೆಯೇ ನೃಪತುಂಗ ರಸ್ತೆ ಮೂಲಕ ಬಂದು ಪೊಲೀಸ್ ಕಾರ್ನರ್ ಬಳಿ ಬಲ ತಿರುವು ಪಡೆದು ಕೆ.ಜಿ.ರಸ್ತೆ ಸಾಗುವ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದುದರಿಂದ ಹಲಸೂರು ಗೇಟ್ ಪೊಲೀಸ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಂಡು ಕೆ.ಜಿ.ರಸ್ತೆ ಕಡೆಗೆ ಸಾಗುವ ವಾಹನಗಳು ಪೊಲೀಸ್ ಕಾರ್ನರ್ ವೃತ್ತದಿಂದ ನೇರವಾಗಿ ನೃಪತುಂಗ ರಸ್ತೆಗೆ ಪವೇಶ ತೆಗೆದುಕೊಂಡು ನೃಪತುಂಗ ರಸ್ತೆಯಲ್ಲಿ ಸಾಗಿ ಕೆ.ಆರ್.ವೃತ್ತದ ಮೂಲಕ ಮುಂದೆ ಸಾಗಲು ಅನುವು ಮಾಡಿಕೊಡಲಾಗಿದೆ.

ಕೆ.ಆರ್.ಸರ್ಕಲ್‍ನಿಂದ ನೃಪತುಂಗ ರಸ್ತೆಯಲ್ಲಿ ಬಂದು ಪೊಲೀಸ್ ಕಾರ್ನರ್ ಬಳಿ ಬಲ ತಿರುವು ಪಡೆದು ಕೆ.ಜಿ.ರಸ್ತೆಗೆ ಸಾಗುವ ಸಂಚಾರವನ್ನು ನಿಷೇಧಿಸಿರುವುದರಿಂದ ಕೆ.ಆರ್.ವೃತ್ತದಿಂದ ಶೇಷಾದ್ರಿ ರಸ್ತೆಯಲ್ಲಿ ಸಾಗಿ ಮುಂದುವರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News