ಸೆ.27ರಂದು ರಫ್ತುದಾರರ ಸಮಾವೇಶ
Update: 2021-09-26 19:23 IST
ಉಡುಪಿ, ಸೆ.26: ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ವಾಣಿಜ್ಯ ಸಪ್ತಾಹದ ಅಂಗವಾಗಿ ರಫ್ತುದಾರರ ಸಮಾವೇಶವನ್ನು ಸೆ.27ರಂದು ಬೆಳಗ್ಗೆ 10.30ಕ್ಕೆ ಮಣಿಪಾಲದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿರು ವರು. ಕರ್ನಾಟಕ ತಾಂತ್ರಿಕ ಸಲಹಾ ಸೇವೆಗಳ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಉಡುಪಿ ನೋಡೆಲ್ ಅಧಿಕಾರಿ ರಮಾನಂದ ನಾಯಕ್ ಅಧ್ಯಕ್ಷತೆ ವಹಿಸಲಿರುವರು.
ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್‌ನ ಮುಖ್ಯ ಪ್ರಬಂಧಕ ರಾಮಾ ನಾಯಕ್, ಕರ್ನಾಟಕ ಕ್ಯಾಶ್ಯೂ ಉತ್ಪಾದಕ ಸಂಘದ ಅಧ್ಯಕ್ಷ ಸಂತೋಷ್ ಡಿಸಿಲ್ವಾ, ಉಡುಪಿ ಚೇಂಬರ್ ಆಪ್ ಕಾಮರ್ಸ್‌ನ ಅಧ್ಯಕ್ಷ ಕೃಷ್ಣರಾವ್ ಕೊಡಂಚ ಭಾಗವಹಿಸಲಿರುವರು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಕಟಣೆ ತಿಳಿಸಿದೆ.