ಹುಚ್ಚಗಣಿ ದೇವಸ್ಥಾನ ತೆರವು ವಿಚಾರ; ಅಧಿಕಾರಿಗಳ ತಲೆದಂಡದ ಬಗ್ಗೆ ಯೋಚಿಸಲಾಗುತ್ತಿದೆ: ಸಚಿವೆ ಶಶಿಕಲಾ ಜೊಲ್ಲೆ

Update: 2021-09-26 14:21 GMT

ಮೈಸೂರು,ಸೆ.26: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವುಗೊಳಿಸಿರುವ ವಿಚಾರದಲ್ಲಿ ಅಧಿಕಾರಿಗಳು ಮಾಡಿರುವುದು ತಪ್ಪು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಸರ್ಕಾರದ ಗಮನಕ್ಕೆ ಬಾರದಂತೆ ಕೆಲಸ ಮಾಡಿದ್ದಾರೆ. ಅಧಿಕಾರಿಗಳ ತಲೆದಂಡದ ಬಗ್ಗೆ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಯೋಚನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ದೇವಸ್ಥಾನ ತೆರವುಗೊಳಿಸಿರುವ ವಿಚಾರದ ಬಗ್ಗೆ ಅಧಿವೇಶನದಲ್ಲಿಯೂ ಚರ್ಚೆ ಆಗಿದೆ. ಇದರ ಬಗ್ಗೆ ಸರ್ಕಾರವು ಮಸೂದೆಯನ್ನು ಜಾರಿಗೆ ತರುತ್ತಿದೆ. ಇದರು ಜನರ ಭಾವನಾತ್ಮಕ ವಿಚಾರವಾಗಿದೆ. ಅವರ ಭಾವನೆಗಳಿಗೂ ಬೆಲೆ ಕೊಡಬೇಕಾಗಿದೆ ಎಂದು ಹೇಳಿದರು.

ಉಚ್ಛ ನ್ಯಾಯಾಲಯ ಆದೇಶವನ್ನು ಪಾಲನೆ ಮಾಡಿಕೊಂಡು ಮಸೂದೆ ಜಾರಿಗೆ ತರಲಾಗುವುದು. ಈ ಮಸೂದೆಯಿಂದ ರಾಜ್ಯದ ಸಾವಿರಾರು ದೇವಾಲಯಗಳ ರಕ್ಷಣೆಯಾಗಲಿದೆ. ಎಲ್ಲಾ ಧರ್ಮದ ದೇವಾಲಯ, ಚರ್ಚು, ಮಸೀದಿಗಳು ರಕ್ಷಣೆಯಾಗಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News