ರಾಷ್ಟ್ರೀಯ ವಿಜ್ಞಾನ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Update: 2021-09-26 14:28 GMT

ಬೆಂಗಳೂರು, ಸೆ. 26: ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನೀಡುವ ‘ರಾಷ್ಟ್ರೀಯ ವಿಜ್ಞಾನ ಪ್ರಶಸ್ತಿ 2021’ಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆರು ವಿಭಾಗಗಳಲ್ಲಿ ಪ್ರಶಸ್ತಿಯನ್ನು ವಿತರಿಸಲಿದ್ದು, ಐದು ವರ್ಷಗಳಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅಭ್ಯರ್ಥಿಗಳನ್ನು ಗುರುತಿಸಿ, ಅರ್ಹರಿಗೆ ಈ ಪ್ರಶಸ್ತಿಗಳನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಇದೇ ಅ.28 ಕೊನೆಯ ದಿನವಾಗಿದ್ದು, ಪ್ರಶಸ್ತಿಗಳನ್ನು ಮುಂದಿನ ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ವಿತರಿಸಲಾಗುವುದು.

ಅರ್ಜಿಯು https://dst.gov.in  ಈ ವೆಬ್‍ಸೈಟ್‍ನಲ್ಲಿ ಲಭ್ಯವಿದ್ದು, ಆಸಕ್ತರು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಾಜಿ ಕಮ್ಯುನಿಕೇಷನ್, ಡಿಪಾರ್ಟ್‍ಮೆಂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಾಜಿ, ಟೆಕ್ನಾಲಾಜಿ ಭವನ್, ನ್ಯೂ ಮೆಹ್ರೌಲಿ ರೋಡ್, ಹೊಸದಿಲ್ಲಿ-110016 ಇಲ್ಲಿಗೆ ಕಳುಹಿಸಿಕೊಡುವಂತೆ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News