ಭಾರತ್ ಬಂದ್ ಗೆ ಕರೆ ನೀಡಿರುವುದು ಸರಿಯಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

Update: 2021-09-26 14:37 GMT

ಬೆಂಗಳೂರು, ಸೆ. 26: ‘ಕೊರೋನ ಸೋಂಕಿನ ಸಂಕಷ್ಟದಿಂದ ರಾಜ್ಯದ ಜನತೆ ಇದೀಗ ಅಷ್ಟೇ ಚೇತರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ರೈತರು ಭಾರತ್ ಬಂದ್ ಕರೆ ನೀಡಿರುವುದು ಸರಿಯಲ್ಲ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ಷೇಪಿಸಿದ್ದಾರೆ.

ರವಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಮಹಾಮಾರಿ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳ ಕಾರ್ಯಚಟುವಟಿಕೆಗಳು ಸಂಪೂರ್ಣ ಕುಂಠಿತಬವಾಗಿದ್ದವು. ಇದೀಗ ಸೋಂಕು ದೃಢ ಪ್ರಮಾಣ ಇಳಿಮುಖವಾಗುತ್ತಿದ್ದು, ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ಪುನರ್ ಆರಂಭವಾಗುತ್ತಿವೆ' ಎಂದು ತಿಳಿಸಿದರು.

‘ಆರ್ಥಿಕ ಚೇತರಿಕೆಯ ಸಂದರ್ಭದಲ್ಲಿ ರೈತರು ಪ್ರತಿಭಟನೆ, ಬಂದ್ ನಡೆಸಿದರೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರೈತ ಸಂಘಟನೆಗಳು ಬಂದ್ ನಡೆಸದೆ ಸರಕಾರದೊಂದಿಗೆ ಸಹಕಾರ ನೀಡಬೇಕು’ ಎಂದು ಬಸವರಾಜ ಬೊಮ್ಮಾಯಿ ಇದೇ ವೇಳೆ ಮನವಿ ಮಾಡಿದರು.

ಭಾರತ್ ಬಂದ್ ಬೇಡ: `ಭಾರತ್ ಬಂದ್ ನಡೆಸುವುದು ಸೂಕ್ತವಲ್ಲ. ಕೋವಿಡ್ ಸೋಂಕಿನಿಂದ ಇದೀನ ತಾನೇ ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಆರ್ಥಿಕ ಚಟುವಟಿಕೆಗಳಿಗೆ ಅನುವು ಮಾಡಿಕೊಡಬೇಕು. ಹೀಗಾಗಿ ಭಾರತ್ ಬಂದ್ ಬೇಡ'

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News