×
Ad

ಭಾರತ್ ಬಂದ್‌ಗೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ : ಇಬ್ರಾಹೀಮ್ ಸಾಹೇಬ್

Update: 2021-09-26 20:26 IST

ಉಡುಪಿ, ಸೆ.27: ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೆ.27ರ ಭಾರತ ಬಂದ್‌ಗೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಇಬ್ರಾಹೀಮ್ ಸಾಹೇಬ್ ಕೋಟ ತಿಳಿಸಿದ್ದಾರೆ.

ಜನವಿರೋಧಿ ರೈತವಿರೋಧಿ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕು ಮತ್ತು ಕನಿಷ್ಟ ಬೆಂಬಲ ಬೆಲೆಗೆ ಕಾನೂನಾತ್ಮಕ ಖಾತ್ರಿ ಒದಗಿಸಬೇಕು ಎಂದು ಆಗ್ರಹಿಸಿ ಭಾರತದಾದ್ಯಂತ ರೈತರು ನಡೆಸುತ್ತಿರುವ ಐತಿಹಾಸಿಕ ಹೋರಾಟಕ್ಕೆ ರಾಜಕೀಯ ಪಕ್ಷಗಳು, ಸಂಘಟನೆಗಳು ಬೆಂಬಲಿಸಿವೆ. ರಾಷ್ಟ್ರೀಯ ನಗದೀಕರಣ ಕ್ರಮಸರಣಿ ಯನ್ನು ರದ್ದು ಮಾಡಬೇಕು ಮತ್ತು ಕಾರ್ಮಿಕ ಸಂಹಿತೆಗಳನ್ನು ರದ್ದುಮಾಡಬೇಕು ಎಂದು ಆಗ್ರಹಿಸಿ ನಡೆಯುವ ಕರ್ನಾಟಕ ಬಂದ್‌ನ್ನು ಒಕ್ಕೂಟ ಬೆಂಬಲಿಸುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News