ಐಪಿಎಲ್: ಕೊಹ್ಲಿ, ಮ್ಯಾಕ್ಸ್‌ವೆಲ್ ಅರ್ಧಶತಕ, ಆರ್‌ಸಿಬಿ 165/6

Update: 2021-09-26 15:52 GMT
photo: twitter.com/cricbuzz

 ದುಬೈ, ಸೆ.26: ನಾಯಕ ವಿರಾಟ್ ಕೊಹ್ಲಿ(51, 42 ಎಸೆತ)ಹಾಗೂ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್(56, 37 ಎಸೆತ) ಅರ್ಧಶತಕದ ಕೊಡುಗೆಯ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈಇಂಡಿಯನ್ಸ್ ವಿರುದ್ಧ ರವಿವಾರ ನಡೆದ ಐಪಿಎಲ್ ಟೂರ್ನಿಯ 39ನೇ ಪಂದ್ಯದಲ್ಲಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದೆ.

ಟಾಸ್ ಜಯಿಸಿದ ಮುಂಬೈ ನಾಯಕ ರೋಹಿತ್ ಶರ್ಮಾ ಆರ್ ಸಿಬಿಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು.

2ನೇ ಓವರ್‌ನಲ್ಲಿ ದೇವದತ್ತ ಪಡಿಕ್ಕಲ್ ವಿಕೆಟನ್ನು ಕಳೆದುಕೊಂಡ ಆರ್‌ಸಿಬಿ ಕಳಪೆ ಆರಂಭ ಪಡೆದಿತ್ತು. ಆಗ ಶಿಖರ್ ಭರತ್(32)ಅವರೊಂದಿಗೆ ಕೈಜೋಡಿಸಿದ ಕೊಹ್ಲಿ ಎರಡನೇ ವಿಕೆಟ್‌ಗೆ 68 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಕೊಹ್ಲಿ ಔಟಾದ ಬಳಿಕ ಆಲ್‌ರೌಂಡರ್ ಮ್ಯಾಕ್ಸ್‌ವೆಲ್ ಕೆಳ ಕ್ರಮಾಂಕದಲ್ಲಿ ತಂಡವನ್ನು ಆಧರಿಸಿದರು. ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು. ಎಬಿಡಿ ವಿಲಿಯರ್ಸ್ ಕೇವಲ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಮುಂಬೈ ಪರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ(3-36) ಯಶಸ್ವಿ ಬೌಲಿಂಗ್ ಮೂಲಕ ಗಮನ ಸೆಳೆದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News