ಪ್ರತಿಭಟನೆ ವೇಳೆ ಸಿಂಘು ಗಡಿಯಲ್ಲಿ ಮೃತಪಟ್ಟ ರೈತ: ʼಹೃದಯಾಘಾತʼ ಎಂದ ಪೊಲೀಸರು

Update: 2021-09-27 09:05 GMT

ಹೊಸದಿಲ್ಲಿ: ಇಂದು ದೇಶಾದ್ಯಂತ ರೈತ ಸಂಘಟನೆಗಳು ಬಂದ್‌ ಗೆ ಕರೆ ನೀಡಿವೆ. ಹಲವಾರು ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಹರ್ಯಾಣದ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ರೈತನೋರ್ವ ಮೃತಪಟ್ಟಿದ್ದು, ಇದು ಹೃದಯಾಘಾತದಿಂದ ಸಂಭವಿಸಿದ ಸಾವು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ ಎಂದು indiatoday ವರದಿ.

ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಹೆಚ್ಚಿನ ವಿವರಗಳನ್ನು ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಸೋಮವಾರ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ದೆಹಲಿ ಗಡಿ ಪ್ರದೇಶಗಳಲ್ಲಿ ದೆಹಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಸಿಂಘು ಗಡಿಯಲ್ಲಿನ ರೈತರು ದಿಲ್ಲಿ-ಹರಿಯಾಣ ಮಾರ್ಗದಲ್ಲಿ 14 ಪ್ರವೇಶ ಮತ್ತು ನಿರ್ಗಮನ ಬಿಂದುಗಳನ್ನು ನಿರ್ಬಂಧಿಸಿದ್ದರಿಂದ ಪ್ರಯಾಣಿಕರು ಕೂಡ ತೊಂದರೆ ಎದುರಿಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News