×
Ad

ಐಟಿಐ ವೃತ್ತಿಪರ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

Update: 2021-09-27 20:27 IST

ಉಡುಪಿ, ಸೆ.27: ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸೆಸೆಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ 1 ಮತ್ತು 2 ವರ್ಷದ ಐಟಿಐ ವೃತ್ತಿಪರ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಿಂದ ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಉನ್ನತೀಕರಣಗೊಂಡು, ರಾಜ್ಯ ವೃತ್ತಿ ಪರಿಷತ್ ಸಂಯೋಜನೆ ಪಡೆದ ಅಟೋಮೊಬೈಲ್‌ನಲ್ಲಿ ಬ್ಯಾಟರಿ ಇಲೆಕ್ಟ್ರಿಕಲ್ ವೆಹಿಕಲ್ ಎಂಬ ಹೊಸ ವೃತ್ತಿ ಪರ ಕೋರ್ಸ್ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಖುದ್ದಾಗಿ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಸೆ. 29 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2986145, 9740541554, 9738439619ನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News