ಕಾಪು ಸರಕಾರಿ ಪಾಲಿಟೆಕ್ನಿಕ್ ಪ್ರವೇಶಕ್ಕೆ ಅವಧಿ ವಿಸ್ತರಣೆ
Update: 2021-09-27 20:28 IST
ಉಡುಪಿ, ಸೆ.27: ಕಾಪುವಿನ ಬೆಳಪುವಿನಲ್ಲಿ ಹೊಸದಾಗಿ ಪ್ರಾರಂಭಗೊಂಡ ಕಾಪು ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎಸೆಸೆಲ್ಸಿ ತೇರ್ಗಡೆ ಗೊಂಡ ವಿದ್ಯಾರ್ಥಿಗಳಿಂದ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.30ರವರೆಗೆ ವಿಸ್ತರಿಸಲಾಗಿದೆ.
ಶೇ.35ರಷ್ಟು ಅಂಕ ಪಡೆದಿರುವ ವಿದ್ಯಾರ್ಥಿಗಳೂ ಕೂಡ ಅರ್ಜಿ ಸಲ್ಲಿಸಬಹು ದಾಗಿದೆ. ಆಟೋಮೆಷನ್ ಆಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಆಂಡ್ ಬಿಗ್ ಡೇಟಾ ಎಂಬ ನೂತನ ವೃತ್ತಿಪರ ಕೋರ್ಸ್‌ಗಳಿಗೆ, ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸರಕಾರಿ ಪಾಲಿಟೆಕ್ನಿಕ್ ಕಾಪು ಸಂಸ್ಥೆಯ ವಿಶೇಷಾಧಿಕಾರಿಗಳ ದೂ.ಸಂ: 9480773870/9945759720ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.