ಆಟೊ- ಬೈಕ್‍ ಢಿಕ್ಕಿ: ಸ್ಥಳದಲ್ಲೇ ಮೂವರು ಮೃತ್ಯು

Update: 2021-09-27 15:43 GMT

ಬೆಂಗಳೂರು, ಸೆ.27: ಆಟೊ ಢಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾಲೂರು ಮೂಲದ ಅಬೀದ್(21),ಸೆಯ್ಯದ್(20) ಹಾಗೂ ಧರ್ಮಪುರಿಯ ಪೂವರಸನ್(19) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಲ್ಲಿ ಆಟೊ ಚಾಲಕ ಮೆಹಬೂಬ್(35) ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಬೈಕ್‍ನಲ್ಲಿ ಮೂವರು ಹೊಸೂರಿಗೆ ತೆರಳುತ್ತಿದ್ದಾಗ ಬಾಗಲೂರಿನ ಬಳಿಯಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News