ಸುರತ್ಕಲ್: ಜೊತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಸಂಘ ಪರಿವಾರ ಕಾರ್ಯಕರ್ತರ ದಾಳಿ; ಐವರ ಬಂಧನ
Update: 2021-09-28 00:43 IST
ಮಂಗಳೂರು: ಜೊತೆಯಾಗಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಸಂಘಪರಿವಾರ ಕಾರ್ಯಕರ್ತರ ತಂಡ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಘಟನೆಗೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕಾರೊಂದಕ್ಕೆ ಗುಂಪೊಂದು ಮುತ್ತಿಗೆ ಹಾಕಿರುವುದು, ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತಿದೆ. ಇದು ಸುರತ್ಕಲ್ ಟೋಲ್ ಗೇಟ್ ಸಮೀಪ ನಡೆದ ಘಟನೆ ಎಂದು ಹೇಳಲಾಗುತ್ತಿದೆ. ಆದರೆ ಘಟನೆ ನಡೆದದ್ದು ಯಾವಾಗ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.