ಸಿಂದಗಿ, ಹಾನಗಲ್ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

Update: 2021-09-28 04:46 GMT

ಬೆಂಗಳೂರು, ಸೆ.28: ರಾಜ್ಯದಲ್ಲಿ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಈ ಎರಡೂ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.

ಹಾನಗಲ್ ನಿಂದ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ ಜೂನ್ 8ರಂದು ನಿಧನರಾಗಿದ್ದರು. ಅದೇರೀತಿ ಸಿಂದಗಿ ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಜನವರಿ 28ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾಗಿದ್ದ ಶಾಸಕ ಸ್ಥಾನಗಳಿಗೆ ಈ ಉಪ ಚುನಾವಣೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News