ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು

Update: 2021-09-28 10:08 GMT

ಹೊಸದಿಲ್ಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಮಂಗಳವಾರ ರಾಜಿನಾಮೆ ನೀಡಿದ್ದಾರೆ.

"ರಾಜಿಯಾಗುವ ಮೂಲಕ ಮನುಷ್ಯ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲು ಆರಂಭಿಸುತ್ತಾನೆ. ಪಂಜಾಬ್‌ ನ ಭವಿಷ್ಯ ಮತ್ತು ಕಲ್ಯಾಣದ ವಿಚಾರದಲ್ಲಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ ನಾನು ಈ ಮೂಲಕ ಪಂಜಾಬ್‌ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಕಾಂಗ್ರೆಸ್‌ ನಲ್ಲಿ ನನ್ನ ಸೇವೆ ಮುಂದುವರಿಸುತ್ತೇನೆ" ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News