ಕಡಬ: ಯುವತಿಯ ಅತ್ಯಾಚಾರ ಪ್ರಕರಣ; ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ಬಂಧನ
Update: 2021-09-28 17:48 IST
ಕಡಬ, ಸೆ.28. ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಕಡಬ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ಎಂಬಾತನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.
ಕಡಬ ಪೊಲೀಸ್ ಠಾಣೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಿವರಾಜ್ ವಿರುದ್ಧ ಯುವತಿಯ ತಂದೆ ನೀಡಿದ ದೂರಿನ ಮೇರೆಗೆ ಕಡಬ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ತನಿಖೆಯನ್ನು ಮುಂದುವರಿಸಲಾಗಿದ್ದು, ಇದರ ಜೊತೆಗೆ ಆಂತರಿಕ ತನಿಖೆಯೂ ನಡೆಯಲಿದೆ. ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿಯನ್ನು ಪತ್ತೆ ಹಚ್ಚಲಾಗಿದ್ದು, ವೈದ್ಯಕೀಯ ವರದಿ ತಯಾರಿಸಲಾಗುತ್ತದೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.