ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಯತ್ನ; ಆರೋಪಿ ವಶ
Update: 2021-09-28 18:15 IST
ಮಂಗಳೂರು, ಸೆ. 28: ಬಜ್ಪೆಯ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಪತ್ತೆ ಹಚ್ಚಿದ್ದಾರೆ.
ಚಿನ್ನ ಅಕ್ರಮ ಸಾಗಾಟಕ್ಕೆ ಯತ್ನಿಸಿದ ಆರೋಪದಲ್ಲಿ ಓರ್ವನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಯಾಣಿಕನು ತಾನು ಧರಿಸಿದ್ದ ಪ್ಯಾಂಟ್‌ನಲ್ಲಿ ಚಿನ್ನವನ್ನು ಪುಡಿಯ ರೂಪದಲ್ಲಿ ಅಡಗಿಸಿಟ್ಟು ಸಾಗಾಟಕ್ಕೆ ಮುಂದಾಗಿದ್ದ. ತಪಾಸಣೆ ವೇಳೆ ಪತ್ತೆಯಾಗಿದ್ದು, ಪ್ರಯಾಣಿಕನಿಂದ 14.69 ಲಕ್ಷ ರೂ. ಮೌಲ್ಯದ ಚಿನ್ನವನ್ನು ಸ್ವಾಧೀನ ಪಡೆಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿಚಾರಣೆ ಮುಂದುವರಿದಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.