×
Ad

ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೆಸರು ಅಂತಿಮ

Update: 2021-09-28 19:55 IST

ಬೆಂಗಳೂರು, ಸೆ.28: 2021ನೆ ಸಾಲಿನ ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಹಾಗೂ ಮುತ್ಸದ್ಧಿ ನಾಯಕ ಎಸ್.ಎಂ.ಕೃಷ್ಣ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರು ದಸರಾ ಮಹೋತ್ಸವಕ್ಕೆ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ದಸರಾ ಮಹೋತ್ಸವದ ಉದ್ಘಾಟಕರನ್ನಾಗಿ ಎಸ್.ಎಂ.ಕೃಷ್ಣ ಅವರನ್ನು ಆಹ್ವಾನಿಸಲು ಇವತ್ತಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಎಸ್.ಎಂ.ಕೃಷ್ಣ ಒಬ್ಬ ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಆಯ್ಕೆ ಮಾಡಿಲ್ಲ. ಬದಲಾಗಿ, ಅವರೊಬ್ಬ ಮುತ್ಸದ್ಧಿ. ಹಲವಾರು ಹುದ್ದೆಯಲ್ಲಿ ಕೆಲಸ ಮಾಡುವಾಗ ಈ ಭಾಗದ ಅಭಿವೃದ್ಧಿಗೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News