×
Ad

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Update: 2021-09-28 19:58 IST

ಉಡುಪಿ, ಸೆ.28: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾನೆಮಾಡಿದ ಪ.ಜಾತಿ ಮತ್ತು ಪ.ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಜಿಮ್‌ ಸ್ಥಾಪನೆಗೆ ಪರಿಶಿಷ್ಟ ಜಾತಿ ಉಪಯೋಜನೆಯಡಿ ಸಹಾಯ ಧನ ನೀಡಲು ಅರ್ಜಿ ಆಹ್ವಾನಿಸಿದೆ.

ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಪದಕ ಪಡೆದ 40 ವರ್ಷದ ಒಳಗಿನ ಕ್ರೀಡಾಪಟುಗಳಿಗೆ 15 ಲಕ್ಷ ರೂಗಳ ವೆಚ್ಚದಲ್ಲಿ ಜಿಮ್ ಸ್ಥಾಪನೆಗೆ ಶೇ. 75ರಷ್ಟು ಸಹಾಯಧನವನ್ನು ನೀಡಲಾಗುತ್ತಿದ್ದು, ನಿಗದಿತ ಅರ್ಜಿ ನಮೂನೆಯಲ್ಲಿ ತಾವು ಮಾಡಿದ ಸಾಧನೆಗಳ ದೃಢೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇಲ್ಲಿಗೆ ಅ.18ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ದೂ.ಸಂ:0820-2521324, 9480886467ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News