ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿ ಹೆಸರಿನಲ್ಲಿ ಹಣ ವಸೂಲಿ; ಆರೋಪಿಯ ಬಂಧನ
Update: 2021-09-28 22:17 IST
ಬೆಂಗಳೂರು, ಸೆ.28: ವಾಣಿಜ್ಯ ತೆರಿಗೆ ಅಧಿಕಾರಿ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚಂದ್ರಪ್ಪ ಯಾನೆ ಚಂದ್ರೇಗೌಡ ಬಂಧಿತ ಆರೋಪಿಯಾಗಿದ್ದಾನೆ. ವಾಣಿಜ್ಯ ತೆರಿಗೆ ಅಧಿಕಾರಿಯ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟಿಲ್ ತಿಳಿಸಿದ್ದಾರೆ.
ರಸ್ತೆ ಬದಿಯಲ್ಲಿ ನಿಂತು ಲಾರಿಗಳಿಂದ ಆರೋಪಿಯು ಹಣ ಸುಲಿಗೆ ಮಾಡುತ್ತಿದ್ದ ಮಾಹಿತಿ ಲಭ್ಯವಾಗಿತ್ತು. ಕಾರ್ಯಾಚರಣೆ ಕೈಗೊಂಡಾಗ ಆರೋಪಿಯು ಸೋಮವಾರ ಲಾರಿ ಅಡ್ಡಗಟ್ಟಿ ವಸೂಲಿ ಮಾಡುತ್ತಿದ್ದಾಗ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.