×
Ad

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿ ಯುವಕನ ಬಂಧನ

Update: 2021-09-29 14:19 IST

ಮಂಗಳೂರು, ಸೆ.29: ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಮಂಗಳೂರು ಪೊಲೀಸರು ಕಿನ್ನಿಗೋಳಿ ನಿವಾಸಿ ಯುವಕನೋರ್ವನನ್ನು ಬಂಧಿಸಿದ್ದಾರೆ.

ಕಿನ್ನಿಗೋಳಿ ಮನ್ನಬೆಟ್ಟು ನಿವಾಸಿ ಮುಹಮ್ಮದ್ ನೌಷಾದ್ (25) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಈತನ ವಿರುದ್ಧ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಈತ ಮೂರು ವರ್ಷಗಳ ಹಿಂದೆ ಸುರತ್ಕಲ್ ಸಮೀಪ ನಡೆದಿದ್ದ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ.

ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News