×
Ad

ಅ.4: ರಾಜ್ಯ ಮಟ್ಟದ ಮಾಹಿತಿ ಕಾರ್ಯಾಗಾರ

Update: 2021-09-29 20:24 IST

ಮಂಗಳೂರು, ಸೆ.29: ದ.ಕ. ಜಿಲ್ಲಾಡಳಿತ, ಜಿಪಂ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ‘ಅಂತ್ಯೋದಯ’ ಇಲಾಖೆಗಳ ವಿವಿಧ ಯೋಜನೆಗಳ ಕುರಿತ ರಾಜ್ಯ ಮಟ್ಟದ ಮಾಹಿತಿ ಕಾರ್ಯಾಗಾರವನ್ನು ಅ.4ರಂದು ಬೆಳಗ್ಗೆ 10 ಗಂಟೆಗೆ ಬಿ.ಸಿ. ರೋಡ್‌ನಲ್ಲಿರುವ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ಕೇಂದ್ರದ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಎಸ್. ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕಾ ಯು. ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಶಾಸಕರು, ಪ್ರಾಧಿಕಾರಗಳು-ನಿಗಮಗಳ ಅಧ್ಯಕ್ಷರು, ಜಿಲ್ಲೆಯ ಗಣ್ಯರು ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಎನ್.ನಾಗಲಾಂಬಿಕಾ ದೇವಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಪೊನ್ನುರಾಜ್, ಸಮಾಜಕಲ್ಯಾಣ ಇಲಾಖೆಯ ಆಯುಕ್ತ ಡಾ. ರವಿಕುಮಾರ್ ಸುರಪುರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಪಿ.ವಸಂತ್‌ಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಪಿ.ಎಸ್. ಕಾಂತರಾಜು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಸಿದ್ದೇಶ್ವರ ಎನ್., ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜಿಪಂ ಸಿಇಒ ಡಾ. ಕುಮಾರ್, ಎಸ್ಪಿ ಋಷಿಕೇಶ್ ಸೋನಾವಣೆ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮತ್ತಿತರರು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News