ಅ.1: ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಮಂಗಳೂರು, ಸೆ.29: ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಅ.1ರಂದು ಬೆಳಗ್ಗೆ 10 ಗಂಟೆಗೆ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ.ಭರತ್ ಶೆಟ್ಟಿ ವೈ., ಹರೀಶ್ ಪೂಂಜ, ಸಂಜೀವ ಮಠಂದೂರು, ಉಮಾನಾಥ್ ಎ.ಕೋಟ್ಯಾನ್ ಭಾಗವಹಿಸಲಿದ್ದಾರೆ.