×
Ad

ಶಾಲೆಗಳಿಗೆ ಲೋಕಾಯುಕ್ತ ಎಸ್ಪಿ ಭೇಟಿ: ಪರಿಶೀಲನೆ

Update: 2021-09-29 22:45 IST

ಮಂಗಳೂರು, ಸೆ.29: ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಅವರ ಆದೇಶದ ಮೇರೆಗೆ ಜಿಲ್ಲಾ ಲೋಕಾಯುಕ್ತ ಎಸ್‌ಪಿ ಕುಮಾರ್ ಸ್ವಾಮಿ ಬುಧವಾರ ಮಂಗಳೂರಿನ ಕೆನರಾ ಹೈಸ್ಕೂಲ್ ಸೇರಿದಂತೆ ಇನ್ನಿತರ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಸರಕಾರ ಕೋವಿಡ್ ನಿಯಮಾವಳಿ ಗಳ ಕುರಿತು ಪರಿಶೀಲನೆ ನಡೆಸಿದರು.

ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸರಕಾರ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್‌ಪಿಗಳಾದ ಕಲಾವತಿ, ಚೆಲುವರಾಜು ಹಾಗೂ ಲೋಕಾಯುಕ್ತ ಇನ್‌ಸ್ಪೆಕ್ಟರ್ ಅಮಾನುಲ್ಲಾ ಖಾನ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News