×
Ad

ಐಪಿಎಲ್: ರಾಜಸ್ಥಾನ ವಿರುದ್ಧ ಆರ್ ಸಿಬಿಗೆ ಏಳು ವಿಕೆಟ್ ಜಯ

Update: 2021-09-29 23:09 IST
photo: twitter.com/IPL

ದುಬೈ: ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್  ವೆಲ್ ಅರ್ಧಶತಕದ ಸಹಾಯದಿಂದ ಐಪಿಎಲ್ ನ 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ)ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಬುಧವಾರ ನಡೆದ ಪಂದ್ಯದಲ್ಲಿ ಗೆಲ್ಲಲು 150 ರನ್ ಗುರಿ ಬೆನ್ನಟ್ಟಿದ ಆರ್ ಸಿಬಿ 17.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು.

ಇನಿಂಗ್ಸ್ ಆರಂಭಿಸಿದ ನಾಯಕ ವಿರಾಟ್ ಕೊಹ್ಲಿ(25 ರನ್ , 20 ಎಸೆತ) ಹಾಗೂ ದೇವದತ್ತ ಪಡಿಕ್ಕಲ್(22 ರನ್, 17 ಎಸೆತ) ಮೊದಲ ವಿಕೆಟ್ ಗೆ 48 ರನ್ ಜೊತೆಯಾಟ ನಡೆಸಿ ಉತ್ತಮ ಆರಂಭವನ್ನು ನೀಡಿದರು.

ಮಧ್ಯಮ ಕ್ರಮಾಂಕದಲ್ಲಿ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್(ಔಟಾಗದೆ 50, 30 ಎಸೆತ, 6 ಬೌಂಡರಿ, 1 ಸಿಕ್ಸರ್) ಹಾಗೂ ಶ್ರೀಕರ್ ಭರತ್(44) 3ನೇ ವಿಕೆಟ್ ಗೆ ಅರ್ಧಶತಕದ ಜೊತೆಯಾಟದಿಂದ ತಂಡವನ್ನು ಆಧರಿಸಿದರು.

ಎಬಿಡಿವಿಲಿಯರ್ಸ್ ಔಟಾಗದೆ 4 ರನ್ ಗಳಿಸಿದರು. ರಾಜಸ್ಥಾನ ಪರವಾಗಿ ಮುಸ್ತಫಿಝರ್ರಹ್ಮಾನ್(2-20) ಯಶಸ್ವಿ ಬೌಲರ್ ಎನಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News