ನಾಯಿ ತ್ಯಾಜ್ಯ ಚೀಲ ಕಡ್ಡಾಯ ಕೋರಿ ಅರ್ಜಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2021-09-29 18:23 GMT

ಬೆಂಗಳೂರು, ಸೆ.29: ಸಾರ್ವಜನಿಕ ಉದ್ಯಾನಗಳಿಗೆ ಸಾಕು ನಾಯಿಗಳನ್ನು ಕರೆದುಕೊಂಡು ಬರುವ ಮಾಲಕರು ಮತ್ತು ಪೋಷಕರು ಅವುಗಳ ಜೊತೆಗೆ `ಬಯೋಡಿಗ್ರೇಡೆಬಲ್ ಪೂಪ್ ಬ್ಯಾಗ್ಸ್'(ಜೈವಿಕ ವಿಘಟನೀಯ ಚೀಲ ಅಥವಾ ನಾಯಿ ತ್ಯಾಜ್ಯ ಚೀಲ) ತರುವುದನ್ನು ಕಡ್ಡಾಯಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು `ಕಂಪ್ಯಾಷನ್ ಅನ್‍ಲಿಮಿಟೆಡ್ ಪ್ಲಸ್ ಆ್ಯಕ್ಷನ್' (ಕ್ಯುಪಾ) ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

ಸಾರ್ವಜನಿಕ ಪಾರ್ಕ್‍ಗಳಲ್ಲಿ ಹಲವರು ತಮ್ಮ ಸಾಕು ನಾಯಿಗಳನ್ನು ಕರೆದುಕೊಂಡು ಬರುತ್ತಾರೆ. ಅವುಗಳು ಅಲ್ಲಿ ಮಲ-ಮೂತ್ರ ವಿಸರ್ಜನೆ ಮಾಡುವುದರಿಂದ ನಾಯಿಗಳ ಪೋಷಕರು ಮತ್ತು ಪಾರ್ಕ್‍ಗೆ ವಾಯು ವಿಹಾರಕ್ಕೆಂದು ಬರುವ ಇತರ ಸಾರ್ವಜನಿಕರಿಗೆ ತೊಂದರೆ ಉಂಟಾ ಗುತ್ತದೆ. ಆರೋಗ್ಯದ ದೃಷ್ಟಿಯಿಂದ ನಾಯಿಗಳಿಗೂ ವಾಯುವಿಹಾರದ ಅವಶ್ಯಕತೆ ಇರುತ್ತದೆ. ಅದೇ ರೀತಿ ಪಾರ್ಕ್‍ಗೆ ಬರುವ ಎಲ್ಲರಿಗೂ ಸ್ವಚ್ಛ ವಾತಾವರಣ ಕಲ್ಪಿಸುವ ಜವಾಬ್ದಾರಿಯೂ ಪಾಲಿಕೆ ಮೇಲಿದೆ. 

ಈ ಹಿನ್ನೆಲೆಯಲ್ಲಿ ತಮ್ಮ ನಾಯಿಗಳ ಜೊತೆಗೆ ಬರುವ ಅವುಗಳ ಮಾಲಕರು ಮತ್ತು ಪೋಷಕರು ತಮ್ಮ ಜೊತೆಗೆ ಸಾಕು ಪ್ರಾಣಿಗಳ ಮಲ-ಮೂತ್ರವನ್ನು ತೆರವುಗೊಳಿಸುವ `ಬಯೋಡಿಗ್ರೇಡೆಬಲ್ ಪೂಪ್ ಬ್ಯಾಗ್' ಹಾಗೂ ಇತರ ವಸ್ತುಗಳನ್ನು ಕಡ್ಡಾಯವಾಗಿ ತರವುವಂತೆ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

 ಹೀಗಾಗಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಘನತ್ಯಾಜ್ಯ ನಿರ್ವಹಣಾ ಬೈಲಾ-2020 ಹಾಗೂ 2020ರ ಆ.24ರ ರಾಜ್ಯ ಸರಕಾರದ ಸುತ್ತೋಲೆಯನ್ನು ಜಾರಿಗೆ ತರುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಬೇಕು. ನಾಯಿಗಳ ಕೊರಳಿಗೆ ಹಗ್ಗ ಹಾಕಿ ಅವುಗಳ ಮಾಲಕರು ಇಲ್ಲವೇ ಪೆÇೀಷಕರು `ಬಯೋಡಿಗ್ರೇಡೆಬಲ್ ಪೂಪ್ ಬ್ಯಾಗ್'ಗಳನ್ನು ತಮ್ಮ ಜೊತೆಗೆ ತಂದರೆ ನಾಯಿಗಳಿಗೆ ಪಾರ್ಕ್‍ಗಳಿಗೆ ಪ್ರವೇಶಕ್ಕೆ ಅನುಮತಿ ನೀಡಲು ಪಾಲಿಕೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News