ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾದ ಅಮರಿಂದರ್ ಸಿಂಗ್

Update: 2021-09-30 06:21 GMT

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಒಂದು ದಿನದ ನಂತರ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇಂದು ಬೆಳಿಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ದಿಲ್ಲಿಯಲ್ಲಿ ಭೇಟಿಯಾದರು.

ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಅಮರಿಂದರ್ ಅವರು ಇತ್ತೀಚೆಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.  ಬುಧವಾರ ಶಾ ಅವರನ್ನು ಭೇಟಿಯಾಗಿ ಒಂದು ಗಂಟೆ ಕಾಲ ಚರ್ಚಿಸಿದರು. ಸಿಂಗ್ ಅವರ ನಡೆ  ಪಕ್ಷ ಬದಲಾವಣೆಯ ಬಗ್ಗೆ ಊಹಾಪೋಹಗಳನ್ನು ಹುಟ್ಟುಹಾಕಿತ್ತು.  ತಾನು ಗೃಹ ಸಚಿವರೊಂದಿಗೆ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಸಿಂಗ್ ಟ್ವೀಟಿಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಕಾಂಗ್ರೆಸ್ ಅಮರಿಂದರ್ ಸಿಂಗ್ ಅವರನ್ನು ಸಂಪರ್ಕಿಸಿದೆ. ಹಿರಿಯ ಕಾಂಗ್ರೆಸ್ ಮುಖಂಡರಾದ ಅಂಬಿಕಾ ಸೋನಿ ಹಾಗೂ  ಕಮಲ್ ನಾಥ್ ಅವರು ಸಿಂಗ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಚುನಾವಣೆಗೆ ನಾಲ್ಕು ತಿಂಗಳಿರುವಾಗ ಸೆಪ್ಟೆಂಬರ್ 18 ರಂದು ಪಂಜಾಬ್ ಮುಖ್ಯಮಂತ್ರಿಯಿಂದ ನಿರ್ಗಮಿಸಬೇಕಾಗಿ ಬಂದ ನಂತರ 79 ವರ್ಷದ ಧುರೀಣ  ತಮ್ಮ ಆಯ್ಕೆಗಳನ್ನು ಅನ್ವೇಷಿಸುತ್ತಿರುವುದನ್ನು ದೃಡೀಕರಿಸಲಿಲ್ಲ ಅಥವಾ ನಿರಾಕರಿಸಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News