ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ವಾರಸುದಾರರಿಗೆ ಪರಿಹಾರ

Update: 2021-09-30 16:20 GMT

ಬೆಂಗಳೂರು, ಸೆ.30: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ಪರಿಹಾರ ಧನವನ್ನು ನೀಡುವ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದೆ.

ರಾಜ್ಯ ಸರಕಾರವು ಘೋಷಿಸಿರುವಂತೆ ಕೋವಿಡ್‍ನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ ಕುಟುಂಬದ ವಾರಸುದಾರರಿಗೆ ‘ಸಂಧ್ಯಾ ಸುರಕ್ಷಾ ಯೋಜನೆ’ಯಡಿ 1ಲಕ್ಷ ರೂ. ಮತ್ತು ಕೇಂದ್ರ ಸರಕಾರದ ಮಾರ್ಗಸೂಚಿಗಳನ್ವಯ ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್‍ಡಿಆರ್‍ಎಫ್)ಯಿಂದ ರೂ. 50 ಸಾವಿರ ರೂ. ಗಳನ್ನು ಪಾವತಿಸಲು ಆದೇಶದಲ್ಲಿ ಸೂಚಿಸಿದೆ.

ವ್ಯಕ್ತಿಯು ರಾಜ್ಯದ ಯಾವುದೇ ಭಾಗದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದರೂ ವಾಸಸ್ಥಳ ವ್ಯಾಪ್ತಿಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.
ಪಾಲಿಕೆಯ ವಾರ್ಡ್ ಕಚೇರಿಗಳಲ್ಲಿ ಕಾನೂನುಬದ್ಧ ವಾರಸುದಾರರಿಂದ ಅರ್ಜಿಗಳನ್ನು ಸ್ವೀಕರಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪಾಲಿಕೆಯ ಹತ್ತಿರದ ವಾರ್ಡ್‍ಗಳಿಗೆ ಬೇಟಿ ನೀಡಲು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News