ಪೆಟ್ರೋಲ್, ಡೀಸೆಲ್ ಬೆಲೆ ಮತ್ತೊಮ್ಮೆ ಏರಿಕೆ

Update: 2021-10-01 07:23 GMT

ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಶುಕ್ರವಾರವೂ ಇಂಧನ ಬೆಲೆ ಹೆಚ್ಚಿಸಿದ್ದು ಪೆಟ್ರೋಲ್  ಹಾಗೂ ಡೀಸೆಲ್ ದರಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ.

ಅಂತರ್ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ದೇಶದಲ್ಲಿಯೂ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ತೈಲ ಮಾರಾಟ ಕಂಪನಿಗಳು ತಿಳಿಸಿವೆ.

ಪ್ರತಿ ಲೀಟರ್ ಪೆಟ್ರೋಲ್ ಬೆಲೆ 25 ಪೈಸೆ ಹಾಗೂ ಡೀಸೆಲ್ ಬೆಲೆ 30 ಪೈಸೆ ಹೆಚ್ದಾಗಿದೆ. ದಿಲ್ಲಿಯಲ್ಲೀಗ ಪೆಟ್ರೋಲ್ ಬೆಲೆ 101.89 ಹಾಗೂ ಡೀಸೆಲ್ ಬೆಲೆ 90.17 ರೂ. ಆಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105.44 ರೂ. ಹಾಗೂ ಡೀಸೆಲ್ ಬೆಲೆ 95.70 ರೂ. ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News