ಸಂಜಯ ಪಾಟೀಲ ಬಹಿರಂಗ ಕ್ಷಮೆಯಾಚಿಸುವಂತೆ ಒತ್ತಾಯ
Update: 2021-10-01 19:06 IST
ಉಡುಪಿ, ಅ.1: ಮಹಿಳೆಯರನ್ನು ಕೀಳಾಗಿ ಕಾಣುವುದು ಬಿಜೆಪಿಗರಿಗೆ ಇದು ಹೊಸದೇನಲ್ಲ. ಓರ್ವ ಶಾಸಕಿಯಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿ ರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ರಾತ್ರಿ ರಾಜಕೀಯ ಮಾಡುವ ಶಾಸಕಿ ಎನ್ನುವ ರೀತಿಯಲ್ಲಿ ಸಂಜಯ ಪಾಟೀಲ ಕೀಳಾಗಿ ಮಾತನಾಡಿರುವುದು ಖಂಡನೀಯ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಟೀಕಿಸಿದ್ದಾರೆ.
ಹೆಣ್ಣನ್ನು ಪೂಜಿಸುವ ಸಮಾಜದಲ್ಲಿ ಒಬ್ಬ ಶಾಸಕಿಯ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಜಯ ಪಾಟೀಲ ಅವರು ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ ಮಹಿಳೆಯರು ಬಿಜೆಪಿಗೆ ತಕ್ಕ ಪಾಠ ಕಲಿಸುವುದರಲ್ಲಿ ಸಂಶಯವಿಲ್ಲ ಎಂದು ಅವರು ಹೇಳಿಕೆ ಯಲ್ಲಿ ತಿಳಿಸಿದ್ದಾರೆ.